10.12. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು ಅಲ್ಲಲ್ಲಿ ಸಾಮಾನ್ಯ, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 10ರಿಂದ ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…