12.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ(ದಕ್ಷಿಣ ಭಾಗ) ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಇದೇ ವೇಳೆಯಲ್ಲಿ ಬಂಗಾಳಕೊಲ್ಲಿಯ ಶ್ರೀಲಂಕಾದ ಆಗ್ನೇಯ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಳೆ ಕಡಿಮೆಯಾಗಲು ಸಹಕಾರಿಯಾಗಿದೆ. ಈ ತಿರುಗುವಿಕೆಯು ಬಲಗೊಳ್ಳುವ ಲಕ್ಷಣಗಳಿವೆ .
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…