Weather Mirror | 02-01-2024 | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಈ ಬಾರಿ ಚಳಿಯೂ ಕ್ಷೀಣ…? |

January 2, 2024
12:39 PM
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದು, ಆತಂಕ ದೂರವಾಗಿದೆ.  ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ದೂರವಾಗಿಲ್ಲ. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಲಕ್ಷಣಗಳಿವೆ. ಇದರೊಂದಿಗೆ ಚಳಿಯ ವಾತಾವರಣವು ಸಮಾಪ್ತಿಗೊಳ್ಳುವ ಸಾಧ್ಯತೆಯೂ ಇದೆ.

3.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಮೋಡ ಇರಬಹುದು. ಕುದುರೆಮುಖ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಧಾರವಾಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದು, ಆತಂಕ ದೂರವಾಗಿದೆ.  ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ದೂರವಾಗಿಲ್ಲ. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಲಕ್ಷಣಗಳಿವೆ. ಇದರೊಂದಿಗೆ ಚಳಿಯ ವಾತಾವರಣವು ಸಮಾಪ್ತಿಗೊಳ್ಳುವ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror