Weather Mirror | 03-01-2024 | ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ | ಜ.9 ರವರೆಗೆ ಮಳೆಯ ಲಕ್ಷಣ | ಭಾರೀ ಮಳೆ ಇಲ್ಲ |

January 3, 2024
11:48 AM
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9 ರ ತನಕ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಭಾರೀ ಮಳೆ ಸಾಧ್ಯತೆ ಕಡಿಮೆ. ಆದರೆ ಅಲ್ಲಲ್ಲಿ ಅನಿರೀಕ್ಷಿತವಾಗಿ ಸಾಮಾನ್ಯ ಮಳೆಯಾಗಬಹುದು.

04.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಜೊತೆಗೆ ಗಾಳಿಯ ಅನಿಯಮಿತ ಚಲನೆಯ ಕಾರಣ ಈಗಿನ ಮುಂಗಾರು ಮಳೆಯ ರೀತಿಯ ವಾತಾವರಣ ಉಂಟಾಗಿದೆ.ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9ರ ತನಕ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಭಾರೀ ಮಳೆ ಸಾಧ್ಯತೆ ಕಡಿಮೆ. ಆದರೆ ಅಲ್ಲಲ್ಲಿ ಅನಿರೀಕ್ಷಿತವಾಗಿ ಸಾಮಾನ್ಯ ಮಳೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror