18.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಒಂದೆರಡು ತುಂತುರು ಮಳೆಯ ಸಾಧ್ಯತೆಯೂ ಇದೆ (ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಇರಬಹುದು). ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ.
ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅರಬ್ಬಿ ಸಮುದ್ರದಲ್ಲಿನ ಗಾಳಿಯ ಅಸಮರ್ಪಕ ಚಲನೆಯಿಂದಾಗಿ ಚಳಿಯ ವಾತಾವರಣವು ಕಡಿಮೆಯಾಗಿ ಹಗುರ ಮೋಡದ ವಾತಾವರಣ ನಿರ್ಮಾಣವಾಗಿದೆ. ಈ ಪರಿಸ್ಥಿತಿಯು ಜನವರಿ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…