11.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಮಂಗಳೂರು ತೀರ ಭಾಗಗಳಲ್ಲಿ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ. ಉಳಿದ ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಒಣ ಹವೆ ಮುಂದುವರಿಯಲಿದೆ.
ಬೀದರ್, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಲಬುರ್ಗಿ – ಮಹಾರಾಷ್ಟ್ರ ಗಡಿ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಒಣ ಹವೆ ಮುಂದುವರಿಯಲಿದೆ.
ತೆಲಂಗಾಣದ ಕರೀಂನಗರ, ಮಹಾರಾಷ್ಟ್ರದ ಚಂದ್ರಪುರ, ನಾಗಪುರ ಹಾಗೂ ಅಮರಾವತಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದಲ್ಲಿ ಫೆ.20 ರ ನಂತರ ಮಳೆ ಸಾಧ್ಯತೆ ಇದೆ. ಶೇ. 50 ರಷ್ಟು ಮಾತ್ರಾ ನಿರೀಕ್ಷೆ ಇದ್ದು, ಬದಲಾಗುವ ಸಾಧ್ಯತೆ ಇದೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…