Weather Mirror | 17-02-2024 | ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ | ಒಣ ಹವೆ ಮುಂದುವರಿಕೆ |

February 17, 2024
11:04 AM
‌ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಒಣ ಹವೆ ಮುಂದುವರಿಯುತ್ತದೆ. ಫೆಬ್ರವರಿ 17ರಿಂದ ಉತ್ತರ ಭಾರತದ ಹಲವು ಕಡೆ ಮಳೆ ಸಾಧ್ಯತೆ ಇದೆ.

18.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸದ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಇರುವುದಿಲ್ಲ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಫೆಬ್ರವರಿ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಆದರೂ ಫೆಬ್ರವರಿ 22ರ ನಂತರ ಸರಿಯಾದ ಮಾಹಿತಿ ಸಿಗಬಹುದು.

ಫೆಬ್ರವರಿ 17ರಿಂದ ಉತ್ತರ ಭಾರತದ ಜಮ್ಮು ಕಾಶ್ಮೀರದಿಂದ ಆರಂಭವಾಗಿ ಹಿಮಾಚಲ ಪ್ರದೇಶ, ದೆಹಲಿ, ಪಂಜಾಬ್, ಹರಿಯಾಣ, ಉತ್ತರಾಖಂಡ, ನೇಪಾಳ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಉತ್ತರ – ಈಶಾನ್ಯ ರಾಜ್ಯಗಳ ತನಕವೂ ಅಲ್ಲಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror