Weather Mirror | 29-10-2023 | ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆ ಸಾಧ್ಯತೆ |

October 29, 2023
11:38 AM
ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.

30.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲೂಕಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು  ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು  ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು  ಸಹಿತ ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಅಲ್ಲಲ್ಲಿ  ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದರೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror