01.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇರುವುದಿಲ್ಲ.ಮಾರ್ಚ್ 1ರಿಂದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ 2 ದಿನಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel