Karnataka Weather | 17-03-2024 | ರಾಜ್ಯದ ಕೆಲವು ತುಂತುರು ಮಳೆ | ಹಲವು ಕಡೆ ಒಣ ಹವೆ |ಮಾ.21 ರಿಂದ ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

March 17, 2024
12:58 PM
ರಾಜ್ಯದ ಹಲವು ಕಡೆ ಒಣ ಹವೆ, ಕೆಲವು ಕಡೆ ತುಂತುರು ಮಳೆ ನಿರೀಕ್ಷೆ ಇದೆ. ಮಾ.21 ರಿಂದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

18.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.….ಮುಂದೆ ಓದಿ…..

ಕೊಡಗು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಮಾರ್ಚ್ 21ರಂದು ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, 22 ಹಾಗೂ 23ರಂದು ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror