Karnataka Weather | 10-04-2024 | ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ವಾತಾವರಣ | ಕೆಲವು ಕಡೆ ಅನಿರೀಕ್ಷಿತ ಮಳೆ ನಿರೀಕ್ಷೆ |ಎ.12 ನಂತರ ಮಳೆಯ ಲಕ್ಷಣ |

April 10, 2024
10:58 AM
ಎಪ್ರಿಲ್ 12 ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

11.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ವಾತಾವರಣದೊಂದಿಗೆ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. (ಸಂಜೆಯ ವೇಳೆಗೆ ಈ ಪ್ರದೇಶಗಳಲ್ಲಿ ಪೂರ್ವದ ಹಾಗೂ ಪಶ್ಚಿಮದ ಗಾಳಿ ಸಂಧಿಸುವ ಪ್ರದೇಶಗಳು). ದಾವಣಗೆರೆ ಒಂದೆರಡು ಕಡೆ ಚಿಕ್ಕ ವ್ಯಾಪ್ತಿಯಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಸ್ವಲ್ಪ ಜಾಸ್ತಿಯೇ ಇರಬಹುದು. ಈಗಿನಂತೆ ಎಪ್ರಿಲ್ 11ರಿಂದ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 12ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror