11.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ವಾತಾವರಣದೊಂದಿಗೆ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. (ಸಂಜೆಯ ವೇಳೆಗೆ ಈ ಪ್ರದೇಶಗಳಲ್ಲಿ ಪೂರ್ವದ ಹಾಗೂ ಪಶ್ಚಿಮದ ಗಾಳಿ ಸಂಧಿಸುವ ಪ್ರದೇಶಗಳು). ದಾವಣಗೆರೆ ಒಂದೆರಡು ಕಡೆ ಚಿಕ್ಕ ವ್ಯಾಪ್ತಿಯಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಸ್ವಲ್ಪ ಜಾಸ್ತಿಯೇ ಇರಬಹುದು. ಈಗಿನಂತೆ ಎಪ್ರಿಲ್ 11ರಿಂದ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನ ಮುನ್ಸೂಚನೆಯಂತೆ ಎಪ್ರಿಲ್ 12ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…