01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು ಅಲ್ಲಲ್ಲಿ ಸಾಮಾನ್ಯವಾಗಿದ್ದರೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 1 ಹಾಗೂ 2ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…