ಹವಾಮಾನ ವರದಿ | 27-05-2024 | ಸಾಮಾನ್ಯ ಮಳೆಯ ಲಕ್ಷಣ | ಬಾಂಗ್ಲಾದೇಶಕ್ಕೆ ಅಪ್ಪಳಿಸಿದ ರೇಮಲ್ ಚಂಡಮಾರುತ | ಜೂ.1 ರಿಂದ ಮುಂಗಾರು ಆಗಮನದ ನಿರೀಕ್ಷೆ |

May 27, 2024
12:14 PM
ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ ಸಿಗಬಹುದು.

28.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಬಂಟ್ವಾಳ, ಪುತ್ತೂರು, ಸುಳ್ಯ, ಧರ್ಮಸ್ಥಳ, ಚಾರ್ಮಾಡಿ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು (ಕೇರಳ ಗಡಿ ಭಾಗಗಳಲ್ಲಿ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕುದುರೆಮುಖ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ, ಚಿತ್ರದುರ್ಗ, ದಾವಣಗೆರೆ, ಗದಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ರೇಮಲ್ ಚಂಡಮಾರುತವು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರತದ ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಹಾನಿ ಮಾಡುವ ಸಾಧ್ಯತೆ ಇದೆ. ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ ಸಿಗಬಹುದು. ಆದರೂ ದಿನಕ್ಕೊಂದರಂತೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror