28.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಬಂಟ್ವಾಳ, ಪುತ್ತೂರು, ಸುಳ್ಯ, ಧರ್ಮಸ್ಥಳ, ಚಾರ್ಮಾಡಿ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು (ಕೇರಳ ಗಡಿ ಭಾಗಗಳಲ್ಲಿ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕುದುರೆಮುಖ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ, ಚಿತ್ರದುರ್ಗ, ದಾವಣಗೆರೆ, ಗದಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರೇಮಲ್ ಚಂಡಮಾರುತವು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರತದ ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಹಾನಿ ಮಾಡುವ ಸಾಧ್ಯತೆ ಇದೆ. ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ ಸಿಗಬಹುದು. ಆದರೂ ದಿನಕ್ಕೊಂದರಂತೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…