ಹವಾಮಾನ ವರದಿ | 11-07-2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಜು.12 ರಿಂದ ಮುಂಗಾರು ಚುರುಕು ಸಾಧ್ಯತೆ |

July 11, 2024
2:38 PM

12.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೇರಳದಲ್ಲಿ ಮಳೆ ಕ್ಷೀಣಿಸಿರುವುದರಿಂದ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕೇರಳದಲ್ಲಿ ಉತ್ತಮ ಮಳೆಯಾದರೆ ಮಾತ್ರ ಈ ಮೂರು ಜಿಲ್ಲೆಗಳಲ್ಲಿ ಪರಿಸ್ಥಿತಿ ಸರಿ ಹೋಗಬಹುದು.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜುಲೈ 12ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 14ರಿಂದ ಮತ್ತು ಅದರ ಮುಂದಿನ 3 ಅಥವಾ 4 ದಿನಗಳ ಕಾಲ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 12ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror