12.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಕೇರಳದಲ್ಲಿ ಮಳೆ ಕ್ಷೀಣಿಸಿರುವುದರಿಂದ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕೇರಳದಲ್ಲಿ ಉತ್ತಮ ಮಳೆಯಾದರೆ ಮಾತ್ರ ಈ ಮೂರು ಜಿಲ್ಲೆಗಳಲ್ಲಿ ಪರಿಸ್ಥಿತಿ ಸರಿ ಹೋಗಬಹುದು.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 12ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 14ರಿಂದ ಮತ್ತು ಅದರ ಮುಂದಿನ 3 ಅಥವಾ 4 ದಿನಗಳ ಕಾಲ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 12ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.
ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಮ್ಯಾನ್ಮಾರ್ ಪ್ರಜೆಯೊಬ್ಬ ಸೇರಿದಂತೆ ನಾಲ್ವರನ್ನು…
ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…
ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…
ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…