Advertisement
ವೆದರ್ ಮಿರರ್

ಹವಾಮಾನ ವರದಿ | 23-09-2014 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ

Share

24.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 25ರ ನಂತರ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

Advertisement

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮತ್ತು ಹಾಸನ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 28 ರಿಂದ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement

ಈಗಿನಂತೆ ಒಳನಾಡು ಭಾಗಗಳಲ್ಲಿ (ಉತ್ತರ ಹಾಗೂ ದಕ್ಷಿಣ) ಸೆಪ್ಟೆಂಬರ್ 25ರಿಂದ ಮಳೆ ಕಡಿಮೆಯಾಗಲಿದ್ದು, 28 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮತ್ತೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಣ್ಣಿನ ಫಲವತ್ತತೆ ನಶಿಸದಂತೆ ಎಚ್ಚರವಹಿಸಿ | ಕೃಷಿ ಸಚಿವರಿಂದ ಮನವಿ |

ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.

60 mins ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು…

1 hour ago

ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ನಿರ್ದೇಶನ

ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ…

2 hours ago

ಪಡಿತರ ಆಹಾರ ಧಾನ್ಯ ಮಾರಾಟ ಮಾಡಿದರೆ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ |

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ…

2 hours ago

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು…

6 hours ago

ಭಾರತದಲ್ಲಿ ಕೃಷಿ ಇಳುವರಿ ಏರಿಕೆಯಾಗುತ್ತಿಲ್ಲ..? | ಕೃಷಿ ವಿಜ್ಞಾನಿಗಳು ಪರಿಶೀಲಿಸಬೇಕು |

ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ…

7 hours ago