ಹವಾಮಾನ ವರದಿ | 29-10-2024 | ಸದ್ಯ ಮಳೆಯ ಸಾಧ್ಯತೆ ಕಡಿಮೆಯಾಗಿದೆ | ನವೆಂಬರ್‌ನಲ್ಲಿ ಕೆಲವು ಕಡೆ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ |

October 29, 2024
10:37 AM
ಒಳನಾಡಿನಲ್ಲಿ ಹಿಂಗಾರು ಮಳೆ ಕಡಿಮೆ ಸಾಧ್ಯತೆ.

30.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ  ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಅಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನ ಮಳೆಯು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಉಂಟಾಗಿದ್ದರೆ, ಒಳನಾಡಿನಲ್ಲಿ ಹಿಂಗಾರು ಮಳೆ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror