30.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಅಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈಗಿನ ಮಳೆಯು ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಉಂಟಾಗಿದ್ದರೆ, ಒಳನಾಡಿನಲ್ಲಿ ಹಿಂಗಾರು ಮಳೆ ಇರಬಹುದು.
22.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
“ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು ಜನನಿಯಿಂದ ಪಾಠ ಕಲಿತ…
ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ…
21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಸೇರಿದಂತೆ…
ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. …
ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು 5600 ಕೋಟಿ ರೂಪಾಯಿಗಳಿಂದ, ಈ…