Advertisement
ವೆದರ್ ಮಿರರ್

ಹವಾಮಾನ ವರದಿ | 30-10-2024 | ಸದ್ಯ ಬಿಸಿಲು-ಅಲ್ಲಲ್ಲಿ ಮೋಡ | ಅ.31 ರಿಂದ ಕೆಲವು ಕಡೆ ಮಳೆ ಸಾಧ್ಯತೆ |

Share

31.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 31ರಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಆರಂಭವಾಗುವ ಸಾಧ್ಯತೆಗಳಿದ್ದು, ನವೆಂಬರ್ 2ರಿಂದ ಕರಾವಳಿಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅಕ್ಟೊಬರ್ 31ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ನವೆಂಬರ್ 4ರ ತನಕ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ, ಹಾವೇರಿ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಉತ್ತರ ಕನ್ನಡಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ನವೆಂಬರ್ 2 ರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದು, ನವೆಂಬರ್ 4 ರ ತನಕ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗುವ ಮುನ್ಸೂಚನೆ ಇದ್ದರೂ ಕಾದು ನೋಡಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago