02.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದ ಮೇಲೆ ಮಳೆಯ ಪ್ರಮಾಣದಲ್ಲಿ ಹೆಚ್ಚು ಕಡಿಮೆ ಇರಬಹುದು. ಈಗಿನಂತೆ ನವೆಂಬರ್ 2 ರಿಂದ ಮಳೆಯ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ನವೆಂಬರ್ 4ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 2 ರಿಂದ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 4ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ) ಗುಡುಗು ಸಹಿತ ಸಂಜೆ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ನವೆಂಬರ್ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ನವೆಂಬರ್ 5 ರ ಸುಮಾರಿಗೆ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮಳೆ ಕಡಿಮೆಯಾದರೂ ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆಗಳಿವೆ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…