09.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಸಾಧ್ಯತೆ ಇದ್ದು, ಕಾಸರಗೋಡು, ಪುತ್ತೂರು, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 9ರಿಂದ ಒಣಹವೆ ಮುಂದುವರಿಯಲಿದ್ದು, ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 14ರಿಂದ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಮಳೆ ಪುನರಾರಂಭಗೊಳ್ಳುವ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿದಂತಹ ತಿರುಗುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಂಡಿದ್ದು, ನವೆಂಬರ್ 13ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…