16.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಭಲವಾಗಿದ್ದರೆ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. (ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು) ಈಗಿನಂತೆ ನವೆಂಬರ್ 17 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 19ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇವತ್ತೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 17ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ, ಬಳ್ಳಾರಿ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು, ಹಾಗೂ ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ.18 ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಕರಾವಳಿ ಭಾಗಗಳಲ್ಲಿ ನವೆಂಬರ್ 20 ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…
ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…
ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.