Weather Mirror | 01-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ | ನ.8ರ ತನಕ ಮಳೆ ಮುಂದುವರಿಯುವ ಸಾಧ್ಯತೆ |

November 1, 2023
12:35 PM
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.

02.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಇರಬಹುದು.

ಈಗಿನ ಈ ಮಳೆಯ ವಾತಾವರಣವು ನವೆಂಬರ್ 8ರ ತನಕ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror