05.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಚಿತ್ರದುರ್ಗ ದಕ್ಷಿಣ ಭಾಗಗಳ ಹೆಚ್ಚಿನ ಕಡೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…
ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…