ಮಾರ್ಚ್ 15ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳು : ಕಾಸರಗೋಡು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿಯ ಒತ್ತಡದ ಪ್ರಭಾವ ಹೆಚ್ಚಾದರೆ ಕರಾವಳಿಯ ಉಳಿದ ಭಾಗಗಳಲ್ಲಿಯೂ ಸಾಮಾನ್ಯ ಮಳೆಯ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.
ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ. ಮಲೆನಾಡಿನ ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.
ಒಳನಾಡು ಜಿಲ್ಲೆಗಳು : ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಅಧಿಕ ತಾಪಮಾನ ಮತ್ತು ಕೆಲವೆಡೆ ಮೋಡದ ವಾತಾವರಣ ಮುಂದುವರಿಯುವ ಸೂಚನೆ ಇದೆ.
ಉತ್ತರ ಭಾರತದ ಮಧ್ಯಮ ಸ್ತರದಲ್ಲಿ ಉಂಟಾದ ಉಷ್ಣ ಮಾರುತ ಪರಿಚಲನ (Anti-Cyclonic Circulation) ವಿಸ್ತಾರಗೊಂಡ ಪರಿಣಾಮವಾಗಿ ಬಂಗಾಳಕೊಲ್ಲಿಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಮುಂದಿನ ಒಂದು ವಾರ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚುವ ಸಾಧ್ಯತೆ ಇದೆ. ಮಾರ್ಚ್ 17ರಿಂದ 19ರವರೆಗೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯ ಸಾಧ್ಯತೆ ವ್ಯಕ್ತವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Thunderstorm activity is likely in coastal and Malnad districts of Karnataka until March 15, mainly during evening and night hours. Due to strengthening anti-cyclonic circulation and moist winds from the Bay of Bengal, scattered thunderstorms are also expected in north and south interior districts between March 17 and 19.

