Advertisement
ವೆದರ್ ಮಿರರ್

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

Share

ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ನಡುವೆ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, 18.03.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು-ಸಹಿತ ಮಳೆಯ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾರ್ಚ್ ಅಂತ್ಯದವರೆಗೂ ಮಳೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ.

ಕರಾವಳಿ ಭಾಗ :  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಗ್ಗಿನಿಂದ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನ ನಂತರ ಮೋಡ ಕವಿಯುವ ಸಾಧ್ಯತೆ ಇದೆ. ಸಂಜೆ ವೇಳೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು-ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದರೆ ಕಾಸರಗೋಡು ಜಿಲ್ಲೆಯಲ್ಲೂ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ-ಧಾರವಾಡ ಗಡಿಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ಗುಡುಗು ಮಳೆಯ ಲಕ್ಷಣಗಳಿವೆ. ಈ ರೀತಿಯ ಮಳೆ ಚಟುವಟಿಕೆ ಮಾರ್ಚ್ 25ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ಇದೆ.  ಮಲೆನಾಡು ಪ್ರದೇಶಗಳಲ್ಲೂ ಮಾರ್ಚ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು-ಸಹಿತ ಮಳೆಯ ಸಾಧ್ಯತೆ ಇದೆ.  ಗಾಳಿಯ ತೀವ್ರತೆ ಹೆಚ್ಚಿದರೆ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳವರೆಗೂ ಮಳೆ ವ್ಯಾಪಿಸಬಹುದು. ಉತ್ತರ ಒಳನಾಡಿನಲ್ಲಿ ಈ ಮಳೆ ಚಟುವಟಿಕೆ ಮಾರ್ಚ್ 29ರವರೆಗೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ-ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು-ಸಹಿತ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನಲ್ಲಿ ಮಳೆಯು ಮಾರ್ಚ್ 20ರವರೆಗೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಕರಿಗೆ ಸೂಚನೆ : ಬೇಸಿಗೆ ಆರಂಭದಲ್ಲೇ ಈ ರೀತಿಯ ಗುಡುಗು-ಮಳೆ ಸಂಭವಿಸುವುದರಿಂದ ತೋಟಗಾರಿಕೆ ಬೆಳೆಗಳು, ಅಡಿಕೆ-ಮೆಣಸು ತೋಟಗಳು ಹಾಗೂ ಕೊಯ್ಲಿಗೆ ಬಂದಿರುವ ಬೆಳೆಗಳಿಗೆ ಮುನ್ನೆಚ್ಚರಿಕೆ ಅಗತ್ಯ. ಗಾಳಿಯೊಂದಿಗೆ ಮಳೆ ಬಂದಲ್ಲಿ ಕೊಂಬೆ ಮುರಿತ ಹಾಗೂ ಅಡಿಕೆ ಉದುರುವ ಸಮಸ್ಯೆ ಉಂಟಾಗಬಹುದು.

Thunderstorm activity is likely across many parts of Karnataka till late March. Coastal and Malnad regions may receive intermittent evening rains till March 25, while North Interior Karnataka could see rain activity till March 29. Farmers are advised to stay alert due to possible gusty winds and localized heavy showers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

7 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

9 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

15 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

16 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

23 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago