Advertisement
ವೆದರ್ ಮಿರರ್

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

Share

ಮಾರ್ಚ್‌ 13ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಹಗಲು ವೇಳೆಯಲ್ಲಿ ಅಧಿಕ ತಾಪಮಾನ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು : ಕರಾವಳಿ ಭಾಗಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹಗಲು ವೇಳೆ ಬಿಸಿಲು ಮತ್ತು ಉಷ್ಣತೆಯ ಪ್ರಮಾಣ ಹೆಚ್ಚಿರಲಿದೆ. ಆದರೆ ಸಂಜೆ ಹಾಗೂ ರಾತ್ರಿ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಬಹುದು.

ಮಲೆನಾಡು ಜಿಲ್ಲೆಗಳು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲಿನ ತಾಪಮಾನ ಅನುಭವವಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಉತ್ತರ ಹಾಗೂ ದಕ್ಷಿಣ ಒಳನಾಡು : ಉತ್ತರ ಒಳನಾಡು ಮತ್ತು ಹೆಚ್ಚಿನ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿದ ತಾಪಮಾನ ಮುಂದುವರಿಯಲಿದ್ದು, ಕೆಲವೆಡೆ ಸಣ್ಣ ಪ್ರಮಾಣದ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಮಾರ್ಚ್‌ 14–15ರಿಂದ ಮಳೆ ಸಾಧ್ಯತೆ :  ಮಧ್ಯಮ ಸ್ತರದಲ್ಲಿ ಅಧಿಕ ತಾಪಮಾನದ ಪರಿಚಲನೆ (ಆಂಟಿ ಸೈಕ್ಲೋನಿಕ್ ಸರ್ಕ್ಯುಲೇಶನ್‌) ಮುಂದುವರಿದಿದ್ದು, ಮಾರ್ಚ್‌ 14ರ ವೇಳೆಗೆ ಇದು ವಿಸ್ತಾರಗೊಂಡು ಬಂಗಾಳ ಕೊಲ್ಲಿಯ ಮೂಲಕ ಗಾಳಿಯ ಚಲನೆ ಹೆಚ್ಚಾಗುವ ಸೂಚನೆಗಳಿವೆ. ಇದರ ಪರಿಣಾಮವಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಾರ್ಚ್‌ 14 ಅಥವಾ 15ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is likely to continue experiencing higher-than-normal daytime temperatures on March 13, especially across coastal, Malnad, and interior regions. However, an anti-cyclonic circulation pattern may weaken by March 14, allowing stronger winds from the Bay of Bengal, which could trigger thunderstorms and rainfall across many parts of the state from March 14 or 15.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

24 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago