08.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಇವತ್ತು ಬೆಳಿಗ್ಗೆ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾದ ಕಾರಣ ತಡ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು (ಸೋಮವಾರಪೇಟೆ ಸಹಿತ), ಹಾಸನದ ಸಕಲೇಶಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಮೇ 10ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸಾಧ್ಯತೆ ಇದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…