ರಾಜ್ಯದಲ್ಲಿ ಈಗಾಗಲೇ ವರುಣನ ಅಬ್ಬರ ಶುರುವಾಗಿದೆ. ಏಪ್ರಿಲ್ 29ರಂದು ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಭಾಗಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.
ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಮಳೆ ಸ್ವಲ್ಪ ತಂಪು ನೀಡಿದೆ. ರಾಯಚೂರಿನಲ್ಲಿ 7 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ಭಾಗಗಳಲ್ಲಿ 40.5 ಮಿಲಿ ಮೀಟರ್ ಮಳೆಯಾಗಿದೆ. ಮಾತ್ರವಲ್ಲದೆ ಭಾಗಮಂಡಲ, ಶೃಂಗೇರಿ, ಶಿವಮೊಗ್ಗ, ಬಾಳೆಹೊನ್ನೂರು, ತುಮಕೂರು, ದೇವರ ಹಿಪ್ಪರಗಿ, ಮುದಗಲ್, ಕೆಂಭಾವಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಹಲವು ಭಾಗಗಳಲ್ಲಿ ಮಳೆಯಾಗಿದೆ. ಭಾನುವಾರ ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದ, ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ಸಂಜೆ ತುಮಕೂರು ಸುತ್ತಮುತ್ತಲಿನ ಹಲವು ಭಾಗಗಳಲ್ಲಿ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.
ತೀವ್ರ ತಾಪಮಾನದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆ ತಂಪೆರದಿದೆ. ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿನಿಂದ ಜನರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿತ್ತು. ಕೃಷಿ ವಲಯದ ಮೇಲೂ ತೀವ್ರ ಬಿಸಿಲು ಕೆಟ್ಟ ಪರಿಣಾಮ ಬೀರಿತ್ತು, ಹಲವು ಭಾಗಗಳಲ್ಲಿ ತೀವ್ರ ಬಿಸಿಲಿಗೆ ಬೆಳೆಗಳು ಒಣಗಿದ್ದವು, ಸದ್ಯ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ತಾಪಮಾನವನ್ನು ಕಡಿಮೆ ಮಾಡಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…