ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

February 20, 2025
11:34 AM
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈ ವಾತಾವರಣವು ಫೆಬ್ರವರಿ 24ರ ತನಕ ಮುಂದುವರಿಯುವ ಲಕ್ಷಣಗಳಿದ್ದು 25ರಿಂದ ಮೋಡ ಕಡಿಮೆಯಾಗಿ ಬಿಸಿಲಿನ ಸಾಧ್ಯತೆ ಇರಬಹುದು.

21.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈ ವಾತಾವರಣವು ಫೆಬ್ರವರಿ 24ರ ತನಕ ಮುಂದುವರಿಯುವ ಲಕ್ಷಣಗಳಿದ್ದು 25ರಿಂದ ಮೋಡ ಕಡಿಮೆಯಾಗಿ ಬಿಸಿಲಿನ ಸಾಧ್ಯತೆ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಮೋಡ ಮಾತ್ರ ಇರಬಹುದು. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಫೆಬ್ರುವರಿ 24ರ ತನಕ ತುಂತುರು ಮಳೆಯ ಸಾಧ್ಯತೆ ಇದೆ. ನಂತರ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿಯುವ ಲಕ್ಷಣಗಳಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಭಾಗದಿಂದ ಬೀಸುತ್ತಿರುವ ಬಿಸಿಗಾಳಿಯ ಪ್ರಭಾವದಿಂದ ಈಗಿನ ಈ ವಾತಾವರಣವು ಉಂಟಾಗಿರಬಹುದು, ಜೊತೆಗೆ ಲಾ ನಿನಾ ಪ್ರಭಾವವೂ ಜೊತೆಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror