ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈ ವಾತಾವರಣವು ಫೆಬ್ರವರಿ 24ರ ತನಕ ಮುಂದುವರಿಯುವ ಲಕ್ಷಣಗಳಿದ್ದು 25ರಿಂದ ಮೋಡ ಕಡಿಮೆಯಾಗಿ ಬಿಸಿಲಿನ ಸಾಧ್ಯತೆ ಇರಬಹುದು.