25.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ವೇಳೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಫೆಬ್ರವರಿ 28ರಿಂದ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಫೆಬ್ರವರಿ 27ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಉತ್ತರ ಸುಮಾತ್ರ ಕಡೆಯಿಂದ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಫೆಬ್ರವರಿ 27 ರಂದು ದಕ್ಷಿಣ ಶ್ರೀಲಂಕಾ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…