Advertisement
ಹವಾಮಾನ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

Share

ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳ ಕಾಲ ಬಿಸಿ ಗಾಳಿ ಹಾಗೂ ತೇವಾಂಶದ ಪರಿಸ್ಥಿತಿ ಇರಲಿದೆ ಎಂದು ಎಚ್ಚರಿಸಿದೆ.

IMD ಮುನ್ಸೂಚನೆಯ ಪ್ರಕಾರ,ಬಿಸಿ ಗಾಳಿ ಹಾಗೂ ತೇವಾಂಶದ ಪರಿಸ್ಥಿತಿ ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರ ಮಳೆ ಸಾಧ್ಯತೆ ಇದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯೊಂದಿಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಇದಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

  • ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ.
  • ಗುಡುಗು-ಮಿಂಚಿನ ವೇಳೆ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬೇಡಿ.
  • ರೈತರು ಹೊಲದ ಕೆಲಸ ಮಾಡುವಾಗ ಹವಾಮಾನ ಮುನ್ಸೂಚನೆ ಗಮನಿಸಬೇಕು.
  • ಮೀನುಗಾರರು ಮತ್ತು ಸಾರ್ವಜನಿಕರು ಸ್ಥಳೀಯ ಆಡಳಿತ ಹಾಗೂ IMD ಸೂಚನೆಗಳನ್ನು ಪಾಲಿಸಬೇಕು.

The India Meteorological Department (IMD) has issued a Yellow Alert for parts of Coastal, North Interior, and South Interior Karnataka, warning of strong winds and isolated rainfall. People are advised to avoid unnecessary travel and follow weather advisories.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

6 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

6 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

6 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

16 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago