ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮೀಸಲಾತಿ ಪಟ್ಟಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಚುನಾವಣಾ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕಟಿಸಲಾಗಿರುವ ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಸುಮಾರು 1,800 ಆಕ್ಷೇಪಣೆಗಳು ಬಂದಿವೆ. ಇವುಗಳನ್ನು ಪರಿಶೀಲಿಸಿ ಈ ತಿಂಗಳೊಳಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು.
ಡಿಸೆಂಬರ್ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದ್ದು, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣೆ ನಡೆಯಬಹುದು ಎಂದು ಸಚಿವರು ತಿಳಿಸಿದರು.
ಬರ ನಿರ್ವಹಣೆಗೆ ₹306 ಕೋಟಿ ಬಿಡುಗಡೆ : ರಾಜ್ಯದಲ್ಲಿ ಬರ ನಿರ್ವಹಣೆ ಮತ್ತು ಕುಡಿಯುವ ನೀರಿನ ಪೂರೈಕೆಗಾಗಿ ಸರ್ಕಾರ ₹306 ಕೋಟಿ ಬಿಡುಗಡೆ ಮಾಡಿದೆ ಎಂದು ಸಚಿವರು ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆ ಹಾಗೂ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ಅಡಿಯಲ್ಲಿ ಅಗತ್ಯ ಅನುದಾನ ಲಭ್ಯವಿದೆ ಎಂದರು.
ಕೊಳವೆಬಾವಿಗಳು ಬತ್ತಿಹೋದ ಪ್ರದೇಶಗಳಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ 24 ಗಂಟೆಯೊಳಗೆ ಟ್ಯಾಂಕರ್‌ಗಳ ಮೂಲಕ ಅಥವಾ ಖಾಸಗಿ ಕೊಳವೆಬಾವಿಗಳ ನೆರವಿನಿಂದ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
Karnataka Minister Eshwar Khandre said the state government has decided to hold elections to all Zilla Panchayats and Taluk Panchayats soon. Around 1,800 objections to the published reservation list are being examined, with the final list expected by the end of the month. The election schedule may be announced in the second week of December, with polling expected in the first or second week of January.
ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿ ವಿನಿಮಯಕ್ಕೆ ಹೊಸ ಅವಕಾಶಗಳನ್ನು ನೀಡಿದರೂ, ಅದರ…
ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಕಲ್ಯಾಣ…
ಕಳೆದ 12 ವರ್ಷಗಳಲ್ಲಿ 1,700ಕ್ಕೂ ಹೆಚ್ಚು ಹಳೆಯ ಹಾಗೂ ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ…
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಹಿಂಗಾರು ಬಿತ್ತನೆ ಚಟುವಟಿಕೆಗಳು…
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರು…
ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಹೊಸ ರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.…