Advertisement
MIRROR FOCUS

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

Share

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1 (ಬುಧವಾರ) ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.  ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಗೂ ಮುಂದುವರಿದ ಭಾರೀ ಮಳೆಯ ಸಾಧ್ಯತೆಯನ್ನು ಪರಿಗಣಿಸಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಮಳೆಯ ಕಾರಣದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದು  ವಸತಿ (ರೆಸಿಡೆನ್ಶಿಯಲ್) ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳು ಯಥಾಸ್ಥಿತಿಯಲ್ಲಿ ನಡೆಯಲಿದ್ದು, ಅವುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೇರಳದ ಉತ್ತರ ಭಾಗ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಲವು ಪ್ರದೇಶಗಳಿಗೆ ಮಳೆ ಎಚ್ಚರಿಕೆ ನೀಡುತ್ತಿದೆ. ಕಾಸರಗೋಡು ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವುದರಿಂದ ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವಿಶೇಷವಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರವಾಸಿಗರು ಸ್ಥಳೀಯ ಆಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಾಗಿದೆ.

Kasaragod district in Kerala has declared a holiday for all educational institutions on July 1 as a precautionary measure following an Orange Alert for heavy rainfall issued by the India Meteorological Department. However, residential schools, scheduled university/public examinations, and interviews will function as planned.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

9 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

9 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

9 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

13 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago