ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಯಾರೊಬ್ಬರೂ ರಬ್ಬರ್ ಅಥವಾ ಚರ್ಮದ ಚಪ್ಪಲಿ ಧರಿಸುವಂತಿಲ್ಲ. ಆರ್ಚಕರಾಗಲಿ, ದೇವರ ದರ್ಶನಕ್ಕೆ ಹೋಗುವ ಭಕ್ತರಾಗಲಿ, ಭದ್ರತಾ ಸಿಬ್ಬಂದಿಯೇ ಆಗಲಿ ಯಾರೇ ಆಗಲಿ ಅವಕಾಶವಿಲ್ಲ. ಇದೇ ಕಾರಣಕ್ಕೆ ಅಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಕಾರ್ಮಿಕರು ಬರಿಗಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರಿಗಾಗಿ ಪಾದರಕ್ಷೆ ಕಳುಹಿಸಿಕೊಟ್ಟಿದ್ದಾರೆ.
ನರೇಂದ್ರ ಮೋದಿಯವರು ಇತ್ತಿಚೀಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಕಾರಿಡಾರ್ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಇದೇ ವೇಳೆಯಲ್ಲಿ ಕಾರ್ಮಿಕರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಾರ್ಮಿಕರಿಗಾಗಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನು ಸ್ವೀಕರಿಸಿದ ಕಾರ್ಮಿಕರ ಕಣ್ಣುಗಳು ತುಂಬಿ ಬಂದಿದ್ದು, ಪ್ರಧಾನಿಯವರು ಸದಾ ತಾವೊಬ್ಬರು ಪ್ರಧಾನ ಸೇವಕ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಅದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕಾರ್ಮಿಕರು ಭಾವುಕರಾಗಿ ನುಡಿದಿದ್ದಾರೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…