Advertisement
ಸುದ್ದಿಗಳು

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

Share

ಪಶ್ಚಿಮಘಟ್ಟ ಪ್ರದೇಶದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಪಶ್ಚಿಮಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಹಲವು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿರುವುದರಿಂದ ಮಲೆನಾಡಿನ ಜನರಲ್ಲಿ ಆತಂಕ ಉಂಟಾಗಿದೆ ಎಂದರು. ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈಗಾಗಲೇ ತಿರಸ್ಕರಿಸುವ ಸ್ಪಷ್ಟ ನಿಲುವು ತೆಗೆದುಕೊಂಡಿದೆ. ಹೀಗಾಗಿ ವರದಿ ಜಾರಿಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಹೇಳಿದರು.

ವರದಿ ಜಾರಿಯಿಂದ ಮಲೆನಾಡಿನ ರೈತರು ಹಾಗೂ ಅಲ್ಲಿನ ಜನರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಆದ್ದರಿಂದ ಮಲೆನಾಡಿನ ರೈತರು ಮತ್ತು ಜನರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಮಧು ಬಂಗಾರಪ್ಪ ಭರವಸೆ ನೀಡಿದರು.

ಮಲೆನಾಡಿನ ಭಾಗದಲ್ಲಿ ಏನು ಆತಂಕ :  ಕಸ್ತೂರಿ ರಂಗನ್ ವರದಿಯ ಸುತ್ತ ಹಲವು ವರ್ಷಗಳಿಂದ ಪಶ್ಚಿಮಘಟ್ಟ ಪ್ರದೇಶದ ರೈತರು, ಸ್ಥಳೀಯ ನಿವಾಸಿಗಳು ಮತ್ತು ಪರಿಸರ ಹೋರಾಟಗಾರರ ನಡುವೆ ಚರ್ಚೆ ನಡೆಯುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಸ್ಥಳೀಯ ಜನರ ಬದುಕು–ಜೀವನೋಪಾಯದ ನಡುವೆ ಸಮತೋಲನ ಸಾಧಿಸುವುದು ಈ ವಿಚಾರದ ಪ್ರಮುಖ ಸವಾಲಾಗಿದೆ. ರಾಜ್ಯ ಸರ್ಕಾರ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂಬ ಸಚಿವರ ಹೇಳಿಕೆ ಮಲೆನಾಡಿನ ಜನರ ಆತಂಕವನ್ನು ಸ್ವಲ್ಪ ಕಡಿಮೆ ಮಾಡುತ್ತದೆ. ಆದರೆ ಇದಕ್ಕೆ ಶಾಶ್ವತವಾದ ಪರಿಹಾರಗಳೂ ಬೇಕಿವೆ.

Karnataka Education Minister Madhu Bangarappa said the state government will not allow implementation of the Kasturirangan report and urged people in the Malnad region not to worry. He accused BJP leaders and MPs of misleading the public over the issue of eco-sensitive areas in the Western Ghats.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

14 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

15 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

15 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

19 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago