ನ.9: ಕಸ್ತೂರಿ ರಂಗನ್ ಬಾದಿತ ಸುಳ್ಯ ಗ್ರಾಮಗಳಲ್ಲಿ ಸರಕಾರಕ್ಕೆ ಮನವಿ ಸಲ್ಲಿಕೆ

October 30, 2020
3:18 PM

ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ‌.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.

ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ‌ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror