ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.
ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…