#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

August 24, 2023
4:48 PM
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

ಕಾವೇರಿ #Cuavery ನೀರಿಗಾಗಿ ತಮಿಳುನಾಡು ಖ್ಯಾತೆ ಮುಗಿಯುವಂತದಲ್ಲ. ಒಂದಲ್ಲ ಒಂದು ಖ್ಯಾತೆ ತೆಗೆಯುತ್ತಲೇ ಇರುತ್ತದೆ. ನೀರು ಕೊಟ್ಟರೂ ಸಮಸ್ಯೆ, ಬಿಟ್ಟಿಲ್ಲ ಅಂದ್ರೆ ಸಮಸ್ಯೆ ಇದ್ದದ್ದೇ. ನಮ್ಮಲ್ಲೇ ಮಳೆ ಕಮ್ಮಿಯಾಗಿ ಈ ಬಾರಿ ಬರದ #Drought ಛಾಯೆ ಆವರಿಸಿದೆ. ಹಾಗಿದ್ದು ಕಾವೇರಿ ನೀರು ಬಿಡಲೇ ಬೇಕು ಎಂದು ತಮಿಳುನಾಡು ವರಸೆ ತೆಗೆದಿದೆ. ನಾಳೆ ಸುಪ್ರೀಂ ಕೋರ್ಟ್‌ #SupremeCourtನಲ್ಲಿ ತಮಿಳುನಾಡು ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

ಕರ್ನಾಟಕದ ಅಫಿಡೆವಿಟ್ನಲ್ಲಿ ಏನಿದೆ? : ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ# CWMA ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ.

ಆದರೆ, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಾಖಲೆಗಳ ಸಹಿತ ಕರ್ನಾಟಕ ತನ್ನ ಅಫಿಡೆವಿಟ್ ನಲ್ಲಿ ಆರೋಪಿಸಿದೆ.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror