ಕಾವೇರಿ #Cuavery ನೀರಿಗಾಗಿ ತಮಿಳುನಾಡು ಖ್ಯಾತೆ ಮುಗಿಯುವಂತದಲ್ಲ. ಒಂದಲ್ಲ ಒಂದು ಖ್ಯಾತೆ ತೆಗೆಯುತ್ತಲೇ ಇರುತ್ತದೆ. ನೀರು ಕೊಟ್ಟರೂ ಸಮಸ್ಯೆ, ಬಿಟ್ಟಿಲ್ಲ ಅಂದ್ರೆ ಸಮಸ್ಯೆ ಇದ್ದದ್ದೇ. ನಮ್ಮಲ್ಲೇ ಮಳೆ ಕಮ್ಮಿಯಾಗಿ ಈ ಬಾರಿ ಬರದ #Drought ಛಾಯೆ ಆವರಿಸಿದೆ. ಹಾಗಿದ್ದು ಕಾವೇರಿ ನೀರು ಬಿಡಲೇ ಬೇಕು ಎಂದು ತಮಿಳುನಾಡು ವರಸೆ ತೆಗೆದಿದೆ. ನಾಳೆ ಸುಪ್ರೀಂ ಕೋರ್ಟ್ #SupremeCourtನಲ್ಲಿ ತಮಿಳುನಾಡು ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.
ಕರ್ನಾಟಕದ ಅಫಿಡೆವಿಟ್ನಲ್ಲಿ ಏನಿದೆ? : ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ# CWMA ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ.
ಆದರೆ, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಾಖಲೆಗಳ ಸಹಿತ ಕರ್ನಾಟಕ ತನ್ನ ಅಫಿಡೆವಿಟ್ ನಲ್ಲಿ ಆರೋಪಿಸಿದೆ.
Source: Digital Media
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490