ಯಥೇಚ್ಚವಾಗಿ ಮಳೆ(Rain) ಸುರಿದು ರಾಜ್ಯದ ಅಣೆಕಟ್ಟುಗಳು(Dam) ತುಂಬಿದರೆ ರೈತರಿಗೆ, ನಾಡಿಗೆ, ಸಕಲ ಜೀವ ರಾಶಿಗಳಿಗೆ ಹಬ್ಬ. ಈ ಸಂಭ್ರಮವನ್ನು ಜಲ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ತಮ್ಮನ್ನು ಹರಸು ತಾಯೇ ಎಂದು ಬೇಡಿಕೊಳ್ಳಲಾಗುತ್ತದೆ. ಕಳೆದ ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ(KRS Dam) ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್‌ಎಸ್ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಲಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ್ (Mudol) ತಾಲೂಕಿನ ಮಿರ್ಜಿ ಹಾಗೂ ಚನಾಳ್ ಗ್ರಾಮದಲ್ಲಿ ಘಟಪ್ರಭಾ ನದಿ (Ghatprabha River) ಮೈದುಂಬಿ ಹರಿಯುತ್ತಿದ್ದು, ಎರಡು ಗ್ರಾಮಗಳಲ್ಲೂ ಪ್ರವಾಹದ (Flood) ಪ್ರರಿಸ್ಥಿತಿ ಎದುರಾಗಿದೆ.
ಮಿರ್ಜಿ ಗ್ರಾಮದ 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಪರಿಣಾಮ ನೂರಕ್ಕೂ ಹೆಚ್ಚು ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇದರ ನಡುವೆಯೇ ಜನ ಮನೆಯಲ್ಲಿದ್ದ ದವಸ ಧಾನ್ಯಗಳನ್ನು ರಕ್ಷಣೆಗೆ ಪರದಾಡುತ್ತಿದ್ದಾರೆ. ದಿನಬಳಕೆಯ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. ಮಿರ್ಜಿ ಗ್ರಾಮಸ್ಥರಿಗೆ 2019 ರಿಂದಲೂ ಘಟಪ್ರಭಾ ನದಿಯ ಪ್ರವಾಹದ ಗೋಳು ಎದುರಾಗಿದೆ. ಗ್ರಾಮವನ್ನು ಶಾಶ್ವತವಾಗಿ ಸ್ಥಳಾಂತರ ಮಾಡುವಂತೆ ಜನ ಅಂದಿನಿಂದಲೂ ಮನವಿ ಮಾಡುತ್ತಿದ್ದಾರೆ. ಈ ಕೂಗಿಗೆ ಈವರೆಗೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ.
– ಅಂತರ್ಜಾಲ ಮಾಹಿತಿ