Advertisement
MIRROR FOCUS

ಜೀವನಾಡಿ ಕಾವೇರಿಗೆ ಸಿಎಂ ಬಾಗಿನ : ಮೆಟ್ಟೂರು ಡ್ಯಾಂನಿಂದ ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ : ಮೈದುಂಬಿ ಹರಿಯುತ್ತಿರುವ ಘಟಪ್ರಭಾ

Share

ಯಥೇಚ್ಚವಾಗಿ ಮಳೆ(Rain) ಸುರಿದು ರಾಜ್ಯದ ಅಣೆಕಟ್ಟುಗಳು(Dam) ತುಂಬಿದರೆ ರೈತರಿಗೆ, ನಾಡಿಗೆ, ಸಕಲ ಜೀವ ರಾಶಿಗಳಿಗೆ ಹಬ್ಬ. ಈ ಸಂಭ್ರಮವನ್ನು ಜಲ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ತಮ್ಮನ್ನು ಹರಸು ತಾಯೇ ಎಂದು ಬೇಡಿಕೊಳ್ಳಲಾಗುತ್ತದೆ. ಕಳೆದ ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ(KRS Dam) ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್‌ಎಸ್ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಲಿದ್ದಾರೆ.

Advertisement
Advertisement
ಯಾವಾಗಲೂ ಜಲಾಶಯ ಭರ್ತಿಯಾದ ಅಥವಾ ಭರ್ತಿಯಾಗಿ 3ನೇ ದಿನ ಬಾಗಿನ ಸಲ್ಲಿಸುವುದು ವಾಡಿಕೆ. ಈ ಬಾರಿ ಜಲಾಶಯ ತುಂಬಿದ ಐದಾರು ದಿನಗಳ ಬಳಿಕ ಬಾಗಿನ ಸಲ್ಲಿಸಲಾಗುತ್ತಿದೆ. ಇಂದು ನಡೆಯುವ ಬಾಗಿನ ಸಮಾರಂಭಕ್ಕೆ ಜಿಲ್ಲಾಡಳಿತ, ಕಾವೇರಿ ನೀರಾವರಿ ನಿಗಮ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಾಡಿಕೆಯಂತೆ ಡಿಸಿಎಂ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಡ್ಯಾಂಗಳು ಭರ್ತಿಯಾಗಿದೆ. ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ (KRS Dam) ಭಾರೀ ಪ್ರಮಾಣದ ನೀರನ್ನು ಹೊರ ಬಿಟ್ಟ ಪರಿಣಾಮ ಮೆಟ್ಟೂರು ಜಲಾಶಯ (Mettur Dam) ಬಹುತೇಕ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗುತ್ತಿದ್ದಂತೆ ತಮಿಳುನಾಡು ಸರ್ಕಾರ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವಂತೆ ಭಾನುವಾರ ಆದೇಶಿಸಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ದುರೈಮುರುಗನ್ ಹಾಗೂ ಇತರರು ಪರಿಸ್ಥಿತಿಯನ್ನು ಅವಲೋಕಿಸಿ ನೀರು ಬಿಡುವಂತೆ ಸೂಚಿಸಲಾಯಿತು. 120 ಅಡಿ ಎತ್ತರದ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟ 109.20 ಅಡಿಗೆ ಏರಿದ್ದು, ಅಣೆಕಟ್ಟು ತುಂಬಲು ಕೇವಲ 11 ಅಡಿಗಳಷ್ಟೇ ಬಾಕಿ ಇದೆ. ಆದ್ದರಿಂದ ಮೆಟ್ಟೂರು ಜಲಾಶಯದಿಂದ ತಕ್ಷಣವೇ ನೀರನ್ನು ಹರಿಬಿಡಲ ಸೂಚಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ್ (Mudol) ತಾಲೂಕಿನ ಮಿರ್ಜಿ ಹಾಗೂ ಚನಾಳ್ ಗ್ರಾಮದಲ್ಲಿ ಘಟಪ್ರಭಾ ನದಿ (Ghatprabha River) ಮೈದುಂಬಿ ಹರಿಯುತ್ತಿದ್ದು, ಎರಡು ಗ್ರಾಮಗಳಲ್ಲೂ ಪ್ರವಾಹದ (Flood) ಪ್ರರಿಸ್ಥಿತಿ ಎದುರಾಗಿದೆ.

Advertisement

ಮಿರ್ಜಿ ಗ್ರಾಮದ 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಪರಿಣಾಮ ನೂರಕ್ಕೂ ಹೆಚ್ಚು ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇದರ ನಡುವೆಯೇ ಜನ ಮನೆಯಲ್ಲಿದ್ದ ದವಸ ಧಾನ್ಯಗಳನ್ನು ರಕ್ಷಣೆಗೆ ಪರದಾಡುತ್ತಿದ್ದಾರೆ. ದಿನಬಳಕೆಯ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. ಮಿರ್ಜಿ ಗ್ರಾಮಸ್ಥರಿಗೆ 2019 ರಿಂದಲೂ ಘಟಪ್ರಭಾ ನದಿಯ ಪ್ರವಾಹದ ಗೋಳು ಎದುರಾಗಿದೆ. ಗ್ರಾಮವನ್ನು ಶಾಶ್ವತವಾಗಿ ಸ್ಥಳಾಂತರ ಮಾಡುವಂತೆ ಜನ ಅಂದಿನಿಂದಲೂ ಮನವಿ ಮಾಡುತ್ತಿದ್ದಾರೆ. ಈ ಕೂಗಿಗೆ ಈವರೆಗೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

11 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

12 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

12 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

13 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

13 hours ago