ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜು ಸ್ಥಿತಿಗತಿ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಚಿವರು, ಗ್ರಾಮಗಳಲ್ಲಿ ಸುಸ್ಥಿರ ಜಲ ಹಾಗೂ ಸುಸ್ಥಿರ ವಿದ್ಯುತ್ ಸರಬರಾಜು ಮಾಡುವ ಮಹತ್ತರ ಆಶಯವನ್ನು ಈ ಬಾರಿ ಕಾರ್ಯಗತಗೊಳಿಸಲು ಮೊದಲ ಹೆಜ್ಜೆ ಇರಿಸಲಾಗಿದ್ದು, ಗ್ರಾಮಗಳ ಸುಧಾರಣೆ, ಆರ್ಥಿಕ ಸುಸ್ಥಿರತೆಯ ಬಗ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು, ಪ್ರವಾಸಿ ಸ್ಥಳಗಳಲ್ಲಿನ ಗ್ರಾಮ ಪಂಚಾಯತಿ ಆಸ್ತಿಗಳನ್ನು ಆದಾಯ ಮೂಲ ಆಸ್ತಿಗಳನ್ನಾಗಿಸಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿನ ಪಂಚಾಯತ್ ಸಂಸ್ಥೆಗಳಲ್ಲಿ ಕರ್ನಾಟಕ ಅಳವಡಿಸಿಕೊಂಡಿರುವ ಪದ್ಧತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಪ್ರಥಮ ಸ್ಥಾನ ನೀಡಿದೆ, ಈ ಬಾರಿ ಗ್ರಾಮ ಪಂಚಾಯತಿಗಳಲ್ಲಿ 1ಸಾವಿರದ 271 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಮೂಲಕ ಅತಿ ಹೆಚ್ಚು ಕರಸಂಗ್ರಹಣೆಯ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಎರಡೂ ಸಾಧನೆಗಳಿಗೆ ಸಾರಥ್ಯವಹಿಸಿದ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರ್‌ಗಳು ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…