ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳರಲಿರುವ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಇವರ ಕಂಚಿನ ಪ್ರತಿಮೆಯ ಮೆರವಣಿಗೆ ಸೋಮವಾರ ಕೊಡಗು ಸಂಪಾಜೆ ಗ್ರಾಮದ ಚೆಕ್ ಪೋಸ್ಟ್ ಬಳಿ ಸ್ವಾಗತಿಸಲಾಯಿತು.
ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1857 ರಲ್ಲಿ ಎಂದು ಉಲ್ಲೇಖಿಸಲಾಗಿದ್ದರೂ ಅದಕ್ಕೂ 20 ವರ್ಷ ಮೊದಲೇ ಬ್ರಿಟಿಷರ ದಾಸ್ಯದ ಪದ್ಧತಿಯನ್ನು ವಿರೋಧಿಸಿ, ದೇಶದಲ್ಲೇ ಮೊದಲ ಸ್ವಾತಂತ್ರ್ಯದ ರಣ ಕಹಳೆ ಮೊಳಗಿಸಿದ್ದ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸುಳ್ಯದ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯನ್ನು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಪ್ರತಿಷ್ಠಾಪಿಸಲು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯು ಸರ್ಕಾರಕ್ಕೆ ಮನವಿ ಮಾಡಿಕೊಂಡ ಮೇರೆಗೆ ಸರ್ಕಾರದಿಂದ ಅನುಮೋದನೆ ದೊರೆತಿದ್ದು ಇದೀಗ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪುತ್ಥಳಿಯ ಅದ್ದೂರಿ ಮೆರವಣಿಗೆ ನಡೆಯಿತು. ಈ ಪುತ್ಥಳಿ ಆಂಧ್ರಪ್ರದೇಶದ ವಿಜಯವಾಡದಲ್ಲಿ ಕಂಚಿನಿಂದ ತಯಾರಾಗಿದ್ದು ಇದರ ಎತ್ತರ ಸುಮಾರು 11 ಅಡಿ ಇದ್ದು ಚಿನ್ನದ ಬಣ್ಣದಿಂದ ಕೂಡಿದೆ. ಸಕಲ ಕಾರ್ಯಕ್ರಮಗಳ ಬಳಿಕ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಅನಾವರಣಗೊಳ್ಳಲಿದೆ.ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…