ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿಗೆ ಭೇಟಿ ನೀಡಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ.
2018ರ ಶಬರಿಮಲೆ ಪ್ರವೇಶ ನಿರ್ಬಂಧಗಳ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ 10 ವರ್ಷದ ಬಾಲಕಿಯ ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.ಇತ್ತೀಚೆಗಷ್ಟೇ 10 ವರ್ಷದ ಬಾಲಕಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು.
ದೇಶದ ಪ್ರಸಿದ್ಧ ದೇವಾಲಯವಾದ ಶಬರಿಮಲೆ ಪ್ರವೇಶವನ್ನು 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ನಿಷೇಧಿಸಲಾಗಿದೆ. ಸಾಮಾನ್ಯವಾಗಿ ಋತುಚಕ್ರದ ವಯಸ್ಸಿನ ಮಹಿಳೆಯರು ಮತ್ತು ಹುಡುಗಿಯರ ಪ್ರವೇಶವನ್ನು ನಿಷೇಧಿಸುವ ಕ್ರಮವಾಗಿದೆ ಎನ್ನುವುದು ಈ ಹಿಂದೆಯೇ ತಿಳಿಸಲಾಗಿದೆ. ಆದರೆ, 2018ರಲ್ಲಿ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ವಯೋಮಾನದ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಹೇಳಿತ್ತು.ಆದರೆ, ಈ ತೀರ್ಪನ್ನು ಪ್ರಶ್ನಿಸುವ ಮರುಪರಿಶೀಲನಾ ಅರ್ಜಿಯು ಉನ್ನತ ನ್ಯಾಯ ಪೀಠದ ಮುಂದೆ ಬಾಕಿ ಉಳಿದಿದೆ.
ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಹರಿಶಂಕರ್ ವಿ ಮೆನನ್ ಅವರ ವಿಭಾಗೀಯ ಪೀಠವು ಉನ್ನತ ನ್ಯಾಯಾಲಯದಲ್ಲಿನ ಪರಿಶೀಲನಾ ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯಕ್ಕೆ ಪ್ರವೇಶಿಸಲು 10 ವರ್ಷದ ಬಾಲಕಿಯ ಮನವಿಯನ್ನು ವಜಾಗೊಳಿಸಿದೆ.
ಶಬರಿಮಲೆಗೆ ಭೇಟಿ ನೀಡುವ ಆನ್‌ಲೈನ್ ಅರ್ಜಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿ ತಿರಸ್ಕರಿಸಿದ ನಂತರ ಬಾಲಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಪ್ರೌಢಾವಸ್ಥೆಗೆ ಬಂದ ಹುಡುಗಿಯರ ಪ್ರವೇಶ ನಿಷೇಧಕ್ಕಾಗಿ 10 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದು ಅವರ ಪ್ರಾಥಮಿಕ ವಾದವಾಗಿತ್ತು. ತಾನು ಪ್ರೌಢಾವಸ್ಥೆಗೆ ಬಂದಿಲ್ಲವಾದ್ದರಿಂದ ಶಬರಿಮಲೆ ಯಾತ್ರೆಯಲ್ಲಿ ಭಾಗವಹಿಸಲು ಅರ್ಹಳಾಗಿದ್ದೇನೆ ಎಂದು ವಾದಿಸಿದ್ದರು.
A 10-year-old girl’s plea to undertake a pilgrimage to the Sabarimala temple during the Mandala-Makaravilakku season is denied by the high court.
Source: The Hindu