Advertisement
ಸುದ್ದಿಗಳು

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿ ಭೇಟಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕಾರ |

Share

ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿಗೆ ಭೇಟಿ ನೀಡಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ.
2018ರ ಶಬರಿಮಲೆ ಪ್ರವೇಶ ನಿರ್ಬಂಧಗಳ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ 10 ವರ್ಷದ ಬಾಲಕಿಯ ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.ಇತ್ತೀಚೆಗಷ್ಟೇ 10 ವರ್ಷದ ಬಾಲಕಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು.

ದೇಶದ ಪ್ರಸಿದ್ಧ  ದೇವಾಲಯವಾದ ಶಬರಿಮಲೆ ಪ್ರವೇಶವನ್ನು  10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ನಿಷೇಧಿಸಲಾಗಿದೆ. ಸಾಮಾನ್ಯವಾಗಿ ಋತುಚಕ್ರದ ವಯಸ್ಸಿನ ಮಹಿಳೆಯರು ಮತ್ತು ಹುಡುಗಿಯರ ಪ್ರವೇಶವನ್ನು ನಿಷೇಧಿಸುವ ಕ್ರಮವಾಗಿದೆ ಎನ್ನುವುದು ಈ ಹಿಂದೆಯೇ ತಿಳಿಸಲಾಗಿದೆ. ಆದರೆ,  2018ರಲ್ಲಿ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ವಯೋಮಾನದ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಹೇಳಿತ್ತು.ಆದರೆ, ಈ ತೀರ್ಪನ್ನು ಪ್ರಶ್ನಿಸುವ ಮರುಪರಿಶೀಲನಾ ಅರ್ಜಿಯು ಉನ್ನತ ನ್ಯಾಯ ಪೀಠದ ಮುಂದೆ ಬಾಕಿ ಉಳಿದಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಹರಿಶಂಕರ್ ವಿ ಮೆನನ್ ಅವರ ವಿಭಾಗೀಯ ಪೀಠವು ಉನ್ನತ ನ್ಯಾಯಾಲಯದಲ್ಲಿನ ಪರಿಶೀಲನಾ ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯಕ್ಕೆ ಪ್ರವೇಶಿಸಲು 10 ವರ್ಷದ ಬಾಲಕಿಯ ಮನವಿಯನ್ನು ವಜಾಗೊಳಿಸಿದೆ.

ಶಬರಿಮಲೆಗೆ ಭೇಟಿ ನೀಡುವ ಆನ್‌ಲೈನ್ ಅರ್ಜಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿ ತಿರಸ್ಕರಿಸಿದ ನಂತರ  ಬಾಲಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಪ್ರೌಢಾವಸ್ಥೆಗೆ ಬಂದ ಹುಡುಗಿಯರ ಪ್ರವೇಶ ನಿಷೇಧಕ್ಕಾಗಿ 10 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದು ಅವರ ಪ್ರಾಥಮಿಕ ವಾದವಾಗಿತ್ತು. ತಾನು ಪ್ರೌಢಾವಸ್ಥೆಗೆ ಬಂದಿಲ್ಲವಾದ್ದರಿಂದ ಶಬರಿಮಲೆ ಯಾತ್ರೆಯಲ್ಲಿ ಭಾಗವಹಿಸಲು ಅರ್ಹಳಾಗಿದ್ದೇನೆ ಎಂದು ವಾದಿಸಿದ್ದರು.

A 10-year-old girl’s plea to undertake a pilgrimage to the Sabarimala temple during the Mandala-Makaravilakku season is denied by the high court.

Source: The Hindu

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

9 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

9 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

23 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago