ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ ದಾಖಲಾಗಿದೆ, ಪರಿಹಾರ ಮತ್ತು ಪುನರ್ವಸತಿಗಾಗಿ ಸಚಿವರು ಕರೆ ನೀಡಿದ್ದಾರೆ. ಕೇರಳದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಭಾರೀ ಮಳೆಯ ಕಾರಣದಿಂದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಜಲಾವೃತಕ್ಕೆ ಕಾರಣವಾಯಿತು. ಕೇರಳ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಕೇರಳದ ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ.
ಮಳೆಯ ಕಾರಣದಿಂದ ವಿವಿಧ ಕಡೆ ನೀರಿನಲ್ಲಿ ಮುಳುಗಿದ ಘಟನೆಗಳಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇಬ್ಬರು ನೀರು ತುಂಬಿದ ಕ್ವಾರಿಗಳಿಗೆ ಬಿದ್ದು, ಇಬ್ಬರು ಸಿಡಿಲು ಬಡಿದು ಮತ್ತು ಒಬ್ಬರು ಗೋಡೆ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕೋಝಿಕ್ಕೋಡ್ ಜಿಲ್ಲೆಯ ಕುನ್ನಮಂಗಲಂನಲ್ಲಿ ಕಳೆದ 24 ಗಂಟೆಗಳಲ್ಲಿ 226 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಅಲಪ್ಪುಳ ಜಿಲ್ಲೆಯ ಚೆರ್ತಾಲದಲ್ಲಿ 215 ಮಿಮೀ, ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ಮತ್ತು ಕೋಝಿಕೋಡ್ ಜಿಲ್ಲೆಯ ಥಾಮರಸ್ಸೆರಿಯಲ್ಲಿ ಕ್ರಮವಾಗಿ 203 ಮಿಮೀ ಮಳೆಯಾಗಿದೆ.
ಈ ನಡುವೆ ನೈರುತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಐಎಂಡಿ ಬುಧವಾರವೇ ತಿಳಿಸಿದೆ. ಆದರೆ ಚಂಡಮಾರುತದ ಕಾರಣದಿಂದ 4-5 ದಿನ ವಿಳಂಬವಾಗುವ ಸಾಧ್ಯತೆಯ ಬಗ್ಗೆಯೂ ಹೇಳಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…